Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:5 - ಕನ್ನಡ ಸತ್ಯವೇದವು J.V. (BSI)

5 ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:5
21 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.


ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.


ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.


ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ವಿುಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ


ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಸಮುವೇಲನು ಅವನನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಅವನು - ಜನರು ಚದರಿಹೋಗುವದನ್ನೂ ನೀನು ನಿಯವಿುತಕಾಲದಲ್ಲಿ ಬಾರದಿರುವದನ್ನೂ ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವದನ್ನೂ ನೋಡಿ -


ಫಿಲಿಷ್ಟಿಯರು ಯುದ್ಧಮಾಡುವದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀವಿುನಲ್ಲಿ ಪಾಳೆಯ ಮಾಡಿಕೊಂಡರು.


ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.


ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.


ಇಗೋ, ಬಂದರು, ಅಯ್ಯಾಥಿನ ಮೇಲೆ ಬಂದಿದ್ದಾರೆ, ವಿುಗ್ರೋನನ್ನು ಹಾದುಹೋಗಿದ್ದಾರೆ, ವಿುಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ,


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು