Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:6 - ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:6
18 ತಿಳಿವುಗಳ ಹೋಲಿಕೆ  

ವಿುದ್ಯಾನ್ಯರ ಹಸ್ತವು ಬಲಗೊಂಡದರಿಂದ ಇಸ್ರಾಯೇಲ್ಯರು ಅವರಿಗೆ ಹೆದರಿ ಪರ್ವತಗಳಲ್ಲಿ ಕಂದರಗುಹೆದುರ್ಗಗಳನ್ನು ಮಾಡಿ ಸೇರಿಕೊಂಡರು.


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಅವನು ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕೋಸ್ಕರ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ - ಒಡೆಯಾ, ಕೇಳು; ದಾವೀದನು ನಮ್ಮ ಪ್ರಾಂತಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಅರಣ್ಯದ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು.


ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು.


ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ಇಸ್ರಾಯೇಲ್ಯರು ವಿುಚ್ಪೆಯಲ್ಲಿ ಕೂಡಿಬಂದಿದ್ದಾರೆಂಬದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ಪ್ರಭುಗಳು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲ್ಯರು ಬಹಳವಾಗಿ ಭಯಪಟ್ಟು ಸಮುವೇಲನಿಗೆ -


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು.


ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅಡಗಿಕೊಂಡಿದ್ದ ಇಸ್ರಾಯೇಲ್ಯರಿಗೆ ಫಿಲಿಷ್ಟಿಯರು ಓಡಿಹೋದರೆಂಬ ವರ್ತಮಾನವು ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.


ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು.


ಇಸ್ರಾಯೇಲ್ ಭಟರು ಸೋತರು, ಸೌಲನೂ ಅವನ ಮಕ್ಕಳೂ ಸತ್ತರು ಎಂಬ ವರ್ತಮಾನವನ್ನು ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲ್ಯರು ಕೇಳಿ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು; ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು