Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:9 - ಕನ್ನಡ ಸತ್ಯವೇದವು J.V. (BSI)

9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸೌಲನು ಜನರಿಂದ ಸರ್ವಾಂಗಹೋಮಕ್ಕೂ, ಸಮಾಧಾನ ಯಜ್ಞಕ್ಕೂ ಬೇಕಾದದ್ದನ್ನು ತರಿಸಿ ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ಸೌಲನು, “ಸರ್ವಾಂಗಹೋಮಕ್ಕೂ ಸಮಾಧಾನಯಜ್ಞಕ್ಕೂ ಬೇಕಾದವುಗಳನ್ನು ತನ್ನಿ” ಎಂದು ಹೇಳಿದನು. ಬಳಿಕ ಸೌಲನು ಸರ್ವಾಂಗಹೋಮವನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:9
13 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ಕೇಡಿಗೆ ಮುಯ್ಯಿ ತೀರಿಸುವೆನು ಅನ್ನಬೇಡ; ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನುದ್ಧರಿಸುವನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೂ ತಾನು ವಾಸಮಾಡುವದಕ್ಕೂ ನಿಮ್ಮ ಎಲ್ಲಾ ಕುಲಗಳೊಳಗಿಂದ ಆದುಕೊಳ್ಳುವ ಸ್ಥಳದಲ್ಲೇ ನೀವು ಆತನ ದರ್ಶನಕ್ಕಾಗಿ ಕೂಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು