Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:1 - ಕನ್ನಡ ಸತ್ಯವೇದವು J.V. (BSI)

1 ಒಂದು ದಿವಸ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ಸೌಲನ ಮಗ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೋಗೋಣ ಬಾ,” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂದು ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊತ್ತುತರುವ ಯುವಕನೊಂದಿಗೆ ಮಾತನಾಡುತ್ತಾ, “ಕಣಿವೆಯ ಆಚೆಗಿರುವ ಫಿಲಿಷ್ಟಿಯರ ಪಾಳೆಯಕ್ಕೆ ಹೋಗೋಣ” ಎಂದು ಹೇಳಿದನು. ಆದರೆ ಯೋನಾತಾನನು ತನ್ನ ತಂದೆಗೆ ಇದನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:1
13 ತಿಳಿವುಗಳ ಹೋಲಿಕೆ  

ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.


ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.


ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.


ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.


ಫಿಲಿಷ್ಟಿಯರ ಕಾವಲುದಂಡು ವಿುಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಸೌಲನಾದರೋ ಗಿಬೆಯ ಪ್ರಾಂತದ ಅಂತ್ಯಭಾಗವಾಗಿರುವ ವಿುಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರೂ


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು