Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:12 - ಕನ್ನಡ ಸತ್ಯವೇದವು J.V. (BSI)

12 ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕೋಟೆಯಲ್ಲಿದ್ದ ಫಿಲಿಷ್ಟಿಯರು ಯೋನಾತಾನ ಮತ್ತು ಅವನ ಸಹಾಯಕನಿಗೆ, “ನಮ್ಮ ಹತ್ತಿರಕ್ಕೆ ಬನ್ನಿ. ನಾವು ನಿಮಗೆ ಒಂದು ಪಾಠ ಕಲಿಸುತ್ತೇವೆ” ಎಂದು ಕೂಗಿ ಹೇಳಿದರು. ಯೋನಾತಾನನು ತನ್ನ ಸಹಾಯಕನಿಗೆ, “ಬೆಟ್ಟದ ಮೇಲಿನವರೆಗೆ ನನ್ನನ್ನು ಹಿಂಬಾಲಿಸು. ಯೆಹೋವನು ಇಸ್ರೇಲರ ವಶಕ್ಕೆ ಫಿಲಿಷ್ಟಿಯರನ್ನು ಒಪ್ಪಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:12
13 ತಿಳಿವುಗಳ ಹೋಲಿಕೆ  

ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು.


ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ ಎಂದು ಹೇಳಿಸಿದನು.


ಅದರೆ ಅವರು - ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆಂಬದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ ಎಂದನು.


ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.


ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.


ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು.


ನಾನು ಈ ಹೊತ್ತು ಈ ಊರಿನ ಬುಗ್ಗೆಯ ಬಳಿಗೆ ಬಂದಾಗ - ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನಷ್ಟೆ; ನೀನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾದರೆ ನೀರಿಗೆ ಬರುವ ಯಾವ ಹುಡುಗಿಗೆ -


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಕಾಲುಗಳಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.


ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು