Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:13 - ಕನ್ನಡ ಸತ್ಯವೇದವು J.V. (BSI)

13 ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಕಾಲುಗಳಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಕೈ ಮತ್ತು ಮೊಣಕಾಲುಗಳ ಸಹಾಯದಿಂದ ಗಟ್ಟಾ ಹತ್ತಿದರು; ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕುರುಳಿಸುತ್ತಾ ಹೋದನು. ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಮೊಣಕಾಲನ್ನು ಹಾಗು ಕೈಗಳನ್ನು ಊರುತ್ತಾ ಕಣಿವೆಯಿಂದ ಮೇಲೆ ಬಂದರು. ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕೆ ಉರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಯೋನಾತಾನನು ತನ್ನ ಕೈಕಾಲುಗಳಿಂದ ಬೆಟ್ಟವನ್ನು ಹತ್ತಿದನು. ಅವನನ್ನು ಹಿಂಬಾಲಿಸಿಕೊಂಡು ಅವನ ಸಹಾಯಕನೂ ಬೆಟ್ಟವನ್ನು ಹತ್ತಿದನು. ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡಿದರು ಅವರು ಮೊದಲ ಆಕ್ರಮಣದಲ್ಲಿ ಅರ್ಧಎಕರೆ ಸ್ಥಳದಲ್ಲಿದ್ದ ಇಪ್ಪತ್ತು ಮಂದಿ ಫಿಲಿಷ್ಟಿಯರನ್ನು ಕೊಂದರು. ಆಕ್ರಮಣಮಾಡಲು ಬಂದವರೊಡನೆ ಯೋನಾತಾನನು ಮುಖಾಮುಖಿಯಾಗಿ ಹೋರಾಡಿದನು. ಯೋನಾತಾನನ ಸಹಾಯಕನು ಅವನ ಹಿಂದೆ ಬರುತ್ತಾ ಗಾಯಾಳುಗಳನ್ನು ಕೊಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೋನಾತಾನನು ತನ್ನ ಕೈಗಳಿಂದಲೂ, ಕಾಲುಗಳಿಂದಲೂ ಹತ್ತಿದನು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಹತ್ತಿದನು. ಆಗ ಫಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:13
10 ತಿಳಿವುಗಳ ಹೋಲಿಕೆ  

ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಹಾರುವೆನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವದಕ್ಕೆ ಶಕ್ತನಾದನು.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ನಿಮ್ಮ ಮೇಲೆ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು. ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ - ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯತೋರಿಸಿಕೊಡುತ್ತೇವೆ ಅನ್ನಲು ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ ಎಂದು ಹೇಳಿದನು.


ಅವರು ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂವಿುಯಲ್ಲೆ ಸುಮಾರು ಇಪ್ಪತ್ತು ಮಂದಿಯನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು