1 ಸಮುಯೇಲ 14:15 - ಕನ್ನಡ ಸತ್ಯವೇದವು J.V. (BSI)15 ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು. ಅಧ್ಯಾಯವನ್ನು ನೋಡಿ |