1 ಸಮುಯೇಲ 14:17 - ಕನ್ನಡ ಸತ್ಯವೇದವು J.V. (BSI)17 ಸೌಲನು ತನ್ನ ಜೊತೆಯಲ್ಲಿದ್ದವರಿಗೆ - ನಮ್ಮನ್ನು ಬಿಟ್ಟುಹೋದವರು ಯಾರೆಂಬದನ್ನು ಲೆಕ್ಕಮಾಡಿ ನೋಡಿರಿ ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಲ್ಲಿ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇರುವದಿಲ್ಲವೆಂದು ತಿಳಿದುಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿರಿ” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡಿದಾಗ ಯೋನಾತಾನನೂ, ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲವೆಂದು ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿ,” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಾಗ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲದಿರುವುದು ತಿಳಿದುಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ, “ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ,” ಎಂದನು. ಅವರು ಲೆಕ್ಕ ನೋಡುವಾಗ, ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |