Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:19 - ಕನ್ನಡ ಸತ್ಯವೇದವು J.V. (BSI)

19 ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆದದರಿಂದ ಅವನು ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲೆ ಫಿಲಿಷ್ಟಿಯರ ಸೈನ್ಯದ ಗದ್ದಲವು ಹೆಚ್ಚು ಹೆಚ್ಚಾಯಿತು. ಆದುದರಿಂದ ಅವನು ದಾಳಹಾಕುವ ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:19
8 ತಿಳಿವುಗಳ ಹೋಲಿಕೆ  

ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ಸಮುವೇಲನು ಅವನನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಅವನು - ಜನರು ಚದರಿಹೋಗುವದನ್ನೂ ನೀನು ನಿಯವಿುತಕಾಲದಲ್ಲಿ ಬಾರದಿರುವದನ್ನೂ ಫಿಲಿಷ್ಟಿಯರು ವಿುಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವದನ್ನೂ ನೋಡಿ -


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು