1 ಸಮುಯೇಲ 14:21 - ಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಮುಂಚಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು ಸೌಲ ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲ್ಯರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಮೊದಲಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಇಬ್ರಿಯರು, ಸೌಲ ಮತ್ತು ಯೋನಾತಾನರ ಜೊತೆಯಲ್ಲಿ ಬಂದ ಇಸ್ರಾಯೇಲರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇದಲ್ಲದೆ, ಮುಂದಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಹಿಬ್ರಿಯರು, ಸೌಲ-ಯೋನಾತಾನರ ಜೊತೆಯಲ್ಲಿ ಬಂದ ಇಸ್ರಯೇಲರನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಫಿಲಿಷ್ಟಿಯರ ಸೇವೆಯಲ್ಲಿ ಮೊದಲಿಂದಲೂ ಇದ್ದ ಇಬ್ರಿಯರು ಈಗಲೂ ಅವರ ಪಾಳೆಯದಲ್ಲಿದ್ದರು. ಆದರೆ ಆಗ ಈ ಇಬ್ರಿಯರು ಸೌಲ ಮತ್ತು ಯೋನಾತಾನರೊಂದಿಗೆ ಸೇರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು. ಅಧ್ಯಾಯವನ್ನು ನೋಡಿ |