Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:25 - ಕನ್ನಡ ಸತ್ಯವೇದವು J.V. (BSI)

25 ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25-26 ಯುದ್ಧವು ನಡೆಯುತ್ತಲೇ ಇದ್ದುದರಿಂದ ಅವರೆಲ್ಲ ಕಾಡಿನೊಳಗೆ ಹೋದರು. ಅಲ್ಲಿ ನೆಲದ ಮೇಲೆಲ್ಲಾ ಇದ್ದ ಜೇನನ್ನು ನೋಡಿದರು. ಇಸ್ರೇಲರು ಜೇನು ಕಟ್ಟಿರುವ ಸ್ಥಳಕ್ಕೆ ಬಂದರು. ಅವರು ಹಸಿದಿದ್ದರೂ ಬಳಲಿದ್ದರೂ ಆ ಜೇನನ್ನು ತಿನ್ನಲಿಲ್ಲ. ತಾವು ಶಾಪಕ್ಕೆ ಗುರಿಯಾಗುತ್ತೇವೆ ಎಂಬ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇಶದ ಜನರೆಲ್ಲರೂ ಅಡವಿಯಲ್ಲಿ ಹೋಗುತ್ತಿರುವಾಗ, ಅಲ್ಲಿ ನೆಲದ ಮೇಲೆ ಜೇನುಗೂಡು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:25
8 ತಿಳಿವುಗಳ ಹೋಲಿಕೆ  

ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು - ಯೆಹೋವನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವದಕ್ಕೆ ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾದೀತು.


ಅವರು ಮೋಶೆಗೆ - ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ಹಾಲೂ ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಅವರು ಅಲ್ಲಿ ಜೇನುತುಪ್ಪ ಹರಿಯುವದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.


ಜೇನು ಸಿಕ್ಕಿತೋ? ವಿುತವಾಗಿ ತಿನ್ನು, ಹೊಟ್ಟೆತುಂಬ ತಿಂದರೆ ಕಾರಿಬಿಟ್ಟೀಯೆ.


ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು