Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:35 - ಕನ್ನಡ ಸತ್ಯವೇದವು J.V. (BSI)

35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸೌಲನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ನಿರ್ಮಿಸಿದನು. ಯೆಹೋವನಿಗಾಗಿ ಆ ಯಜ್ಞವೇದಿಕೆಯನ್ನು ಸ್ವತಃ ಸೌಲನೇ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:35
10 ತಿಳಿವುಗಳ ಹೋಲಿಕೆ  

ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಮರುದಿವಸ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಜನರ ಬಳಿಗೆ ಹೋಗಿ ಅವರಿಗೆ - ರಕ್ತವನ್ನು ಭುಜಿಸಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಬೇಡಿರಿ; ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿ ತಂದು ಕೊಂದು ತಿನ್ನಬೇಕೆಂದು ಹೇಳಿರಿ ಅಂದನು. ಹಾಗೆಯೇ ಜನರೆಲ್ಲರೂ ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು