Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:37 - ಕನ್ನಡ ಸತ್ಯವೇದವು J.V. (BSI)

37 ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೇ? ನೀವು ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ಕೇಳಿಕೊಂಡನು. ಆದರೆ ಸರ್ವೇಶ್ವರ ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:37
15 ತಿಳಿವುಗಳ ಹೋಲಿಕೆ  

ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥನಾಗಿ ಬರುವಿ; ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು ಎಂದು ಹೇಳಿದನು.


ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.


ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ - ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಯೆಹೋವನನ್ನು ಕೇಳಲು ಆತನು - ಮೊದಲು ಯೆಹೂದಕುಲದವರು ಹೋಗಲಿ ಎಂದು ಹೇಳಿದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು