1 ಸಮುಯೇಲ 14:39 - ಕನ್ನಡ ಸತ್ಯವೇದವು J.V. (BSI)39 ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು” ಎಂದು ಹೇಳಿದನು; ಜನರು ಏನೂ ಮಾತನಾಡದೆ ಮೌನವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |