Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:41 - ಕನ್ನಡ ಸತ್ಯವೇದವು J.V. (BSI)

41 ಅನಂತರ ಸೌಲನು - ಇಸ್ರಾಯೇಲ್ ದೇವರೇ ಸತ್ಯವನ್ನು ತಿಳಿಸು ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಲ್ಲಿ ಅದು ಅವನಿಗೂ ಯೋನಾತಾನನಿಗೂ ಬಂದಿತು; ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:41
9 ತಿಳಿವುಗಳ ಹೋಲಿಕೆ  

ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.


ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಆಗ ಸೌಲನು ಅವರಿಗೆ - ನೀವೆಲ್ಲರೂ ಒಂದು ಕಡೆಯಲ್ಲಿರಿ; ನಾನೂ ನನ್ನ ಮಗನಾದ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು ಅನ್ನಲು ಅವರು - ನಿನ್ನ ಇಷ್ಟದಂತೆ ಆಗಲಿ ಅಂದರು.


ಸೌಲನು ತಿರಿಗಿ - ನಮ್ಮಿಬ್ಬರೊಳಗೆ ಚೀಟುಹಾಕಿರಿ ಎಂದು ಹೇಳಿದನು. ಹಾಗೆಯೇ ಮಾಡಿದಲ್ಲಿ ಚೀಟು ಯೋನಾತಾನನಿಗೆ ಬಿದ್ದಿತು.


ಚೀಟುಹಾಕುವದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು