Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:48 - ಕನ್ನಡ ಸತ್ಯವೇದವು J.V. (BSI)

48 ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇದಲ್ಲದೆ ಅವನು ಸುಲಿಗೆ ಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ, ಅವರನ್ನು ಸದೆಬಡಿದು ಇಸ್ರಯೇಲರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:48
6 ತಿಳಿವುಗಳ ಹೋಲಿಕೆ  

ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಆಗ ಅಮಾಲೇಕ್ಯರು ರೆಫೀದೀವಿುನಲ್ಲಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡುವದಕ್ಕೆ ಬರಲು


ಆಗ ಯೆಹೋವನು ಅವರನ್ನು ಸೂರೆ ಮಾಡುವವರ ಕೈಯಿಂದ ತಪ್ಪಿಸುವದಕ್ಕೋಸ್ಕರ ನ್ಯಾಯಸ್ಥಾಪಕರನ್ನು ಕಳುಹಿಸಿದರೂ


ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ಭುಜಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು