1 ಸಮುಯೇಲ 14:6 - ಕನ್ನಡ ಸತ್ಯವೇದವು J.V. (BSI)6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೋನಾತಾನನು ತನ್ನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಸಹಾಯಕನಿಗೆ, “ಆ ಹೊರದೇಶಿಯರ ಪಾಳೆಯಕ್ಕೆ ಹೋಗೋಣ ಬಾ. ಈ ಜನರನ್ನು ಸೋಲಿಸಲು ಯೆಹೋವನು ಬಹುಶಃ ನಮ್ಮನ್ನು ಬಳಸಬಹುದು. ಯೆಹೋವನನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ನಮ್ಮಲ್ಲಿ ಅನೇಕ ಸೈನಿಕರಿದ್ದರೂ ಇಲ್ಲವೆ ಕೆಲವೇ ಸೈನಿಕರಿದ್ದರೂ ಅದು ಲೆಕ್ಕಕ್ಕೆ ಬರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.
ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.