Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:7 - ಕನ್ನಡ ಸತ್ಯವೇದವು J.V. (BSI)

7 ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:7
8 ತಿಳಿವುಗಳ ಹೋಲಿಕೆ  

ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಆಗ ಯೋನಾತಾನನು ಅವನಿಗೆ - ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.


ಸೇವಕರು ಅರಸನಿಗೆ - ನಮ್ಮ ಒಡೆಯನಾದ ಅರಸನಿಗೆ ಸರಿತೋಚಿದ್ದನ್ನು ಮಾಡಸಿದ್ಧರಾಗಿದ್ದೇವೆ ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು