Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:1 - ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಸೌಲನಿಗೆ - ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ಅಭಿಷೇಕಿಸುವದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುವೇಲನು ಸೌಲನಿಗೆ, “ಯೆಹೋವನು ನಿನ್ನನ್ನು ತನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕೋಸ್ಕರ ನನ್ನನ್ನೇ ಕಳುಹಿಸಿದನಲ್ಲಾ; ಆತನು ಈಗ ಹೇಳುವುದನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:1
10 ತಿಳಿವುಗಳ ಹೋಲಿಕೆ  

ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು ವಿಧೇಯರಾಗಿ ಆತನನ್ನು ಸೇವಿಸುತ್ತಾ ತಪ್ಪದೆ ಆತನ ಮಾತು ಕೇಳುವವರಾಗಿ ಆತನನ್ನೇ ಹೊಂದಿಕೊಂಡಿರುವದಾದರೆ ಎಷ್ಟೋ ಒಳ್ಳೇದು.


ಆಗ ಸಮುವೇಲನು - ನೀನು ಬುದ್ಧಿಹೀನಕಾರ್ಯವನ್ನು ಮಾಡಿದೆ; ನೀನು ನಿನ್ನ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕೈಕೊಂಡಿದ್ದರೆ ಆತನು ನಿನ್ನ ರಾಜ್ಯವನ್ನು ಇಸ್ರಾಯೇಲ್ಯರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದನು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಸೌಲನು ಬರುವದಕ್ಕೆ ಒಂದು ದಿವಸ ಮುಂದಾಗಿ ಯೆಹೋವನು ಸಮುವೇಲನಿಗೆ -


ಆಗ ಎಲೀಷನು ಅವನಿಗೆ - ಯೆಹೋವನ ವಾಕ್ಯವನ್ನು ಕೇಳು; ಆತನು - ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು ಅನ್ನುತ್ತಾನೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು