Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:12 - ಕನ್ನಡ ಸತ್ಯವೇದವು J.V. (BSI)

12 ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:12
12 ತಿಳಿವುಗಳ ಹೋಲಿಕೆ  

ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ ತನ್ನ ಹೆಸರನ್ನುಳಿಸುವ ಮಗನಿಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ ಅದಕ್ಕೆ ತನ್ನ ಹೆಸರನ್ನಿಟ್ಟನು. ಅದು ಇಂದಿನವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭವೆಂದೆನಿಸಿಕೊಳ್ಳುತ್ತದೆ.


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.


ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು.


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಆರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು.


ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು