Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:13 - ಕನ್ನಡ ಸತ್ಯವೇದವು J.V. (BSI)

13 ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:13
17 ತಿಳಿವುಗಳ ಹೋಲಿಕೆ  

ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ಅವನು ಒಂದಾನೊಂದು ದಿವಸ ತನ್ನ ತಾಯಿಗೆ - ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ; ಇಗೋ, ಆ ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು ಎಂದು ಹೇಳಲು ಆಕೆಯು - ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಅಂದಳು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.


ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.


ಕಣ್ಣು ರೆಪ್ಪೆಗಳನ್ನೆತ್ತಿಕೊಂಡು ಎಷ್ಟೋ ಮೇಲೆ ಮೇಲೆಯೇ ನೋಡುತ್ತಿರುವ ಇನ್ನೊಂದು ತರದವರುಂಟು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಆ ಮನುಷ್ಯನು - ನನ್ನ ಜೊತೆಯಲ್ಲಿರುವದಕ್ಕೆ ನೀನು ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.


ನಿನ್ನನು ನೀನೇ ಹೊಗಳಿಕೊಳ್ಳಬೇಡ, ಮತ್ತೊಬ್ಬನು ಹೊಗಳಿದರೆ ಹೊಗಳಲಿ; ಆತ್ಮಸ್ತುತಿ ಬೇಡ, ಪರನು ನಿನ್ನನ್ನು ಸ್ತುತಿಸಿದರೆ ಸ್ತುತಿಸಲಿ.


ಅದು ತೀರುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವದಕ್ಕೋಸ್ಕರ ಎದುರಿಗೆ ಹೋಗಲು


ಆಗ ಸೌಲನು ಸಮುವೇಲನಿಗೆ - ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು.


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು