1 ಸಮುಯೇಲ 15:22 - ಕನ್ನಡ ಸತ್ಯವೇದವು J.V. (BSI)22 ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ . ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು. ಅಧ್ಯಾಯವನ್ನು ನೋಡಿ |