1 ಸಮುಯೇಲ 15:26 - ಕನ್ನಡ ಸತ್ಯವೇದವು J.V. (BSI)26 ಅದಕ್ಕೆ ಸಮುವೇಲನು - ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವದಿಲ್ಲ; ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಇಸ್ರಾಯೇಲ್ಯರ ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ಹೇಳಿ ತಿರುಗಿಕೊಂಡು ಹೊರಡಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ಸಮುವೇಲನು ಸೌಲನಿಗೆ, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ನಿರಾಕರಿಸಿರುವೆ. ಈಗ ಆತನೂ ನಿನ್ನನ್ನು ಇಸ್ರೇಲಿನ ರಾಜತ್ವದಿಂದ ನಿರಾಕರಿಸುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.