Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:30 - ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:30
10 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ಒಬ್ಬನೇ ದೇವರಿಂದ ಬರುವಂಥ ಮಾನವನ್ನು ಅಪೇಕ್ಷಿಸದೆ ಒಬ್ಬರಿಂದೊಬ್ಬರು ಮಾನವನ್ನು ಅಂಗೀಕರಿಸುವವರಾದ ನೀವು ಹೇಗೆ ನಂಬೀರಿ?


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು; ಇಂಥವರ ಸಹವಾಸವನ್ನೂ ಮಾಡದಿರು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಆಗ ಸೌಲನು ದೇವರನ್ನು ಆರಾಧಿಸಿದನು.


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು