Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:7 - ಕನ್ನಡ ಸತ್ಯವೇದವು J.V. (BSI)

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಹೊಡೆಯುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನು ಅಮಾಲೇಕ್ಯರನ್ನು ಸೋಲಿಸಿದನು. ಅವನು ಹವೀಲಾದಿಂದ ಈಜಿಪ್ಟಿನ ಗಡಿಯಲ್ಲಿರುವ ಶೂರಿನವರೆಗೂ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:7
11 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಸುಲಿಗೆಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಅವರನ್ನು ಮುರಿಬಡಿದು ಇಸ್ರಾಯೇಲ್ಯರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.


ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರ ದೊರಕುವ ಹವೀಲ ದೇಶವನ್ನೆಲ್ಲಾ ಸುತ್ತುವದು.


ಆದರೆ ದುಷ್ಟನಿಗೆ ಮೇಲಾಗದು, ನೆರಳಿನಂತಿರುವ ಅವನ ದಿನಗಳು ಹೆಚ್ಚುವದಿಲ್ಲ; ಅವನು ದೇವರಿಗೆ ಹೆದರುವವನಲ್ಲವಷ್ಟೆ.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ


ಅವರು ಅಮಾಲೇಕ್ಯರಲ್ಲಿ ಉಳಿದವರನ್ನು ಸಂಹರಿಸಿ ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.


ಹವೀಲಾ, ಯೋಬಾಬ್ ಎಂಬ ಸ್ಥಳಗಳವರು. ಇವರೆಲ್ಲರೂ ಯೊಕ್ತಾನನ ಸಂತಾನದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು