Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:10 - ಕನ್ನಡ ಸತ್ಯವೇದವು J.V. (BSI)

10 ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಅವನ ಬಳಿಗೆ ಬರಮಾಡಿದರೂ ಅವನು - ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಇಷಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನು ಸಮುವೇಲನ ಬಳಿಗೆ ಬರಮಾಡಿದರೂ ಅವನು, “ಯೆಹೋವನು ಇವರನ್ನು ಆರಿಸಿಕೊಳ್ಳಲಿಲ್ಲ” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಷಯನು ತನ್ನ ಏಳು ಜನ ಮಕ್ಕಳನ್ನು ಸಮುವೇಲನಿಗೆ ತೋರಿಸಿದನು. ಆದರೆ ಸಮುವೇಲನು, “ಯೆಹೋವನು ಇವರಲ್ಲಿ ಯಾರೊಬ್ಬನನ್ನೂ ಆರಿಸಿಕೊಳ್ಳಲಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅನಂತರ ಇಷಯನು ತನ್ನ ಏಳುಮಂದಿ ಪುತ್ರರನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಸಮುಯೇಲನು ಇಷಯನಿಗೆ, “ಯೆಹೋವ ದೇವರು ಇವರಲ್ಲಿ ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:10
4 ತಿಳಿವುಗಳ ಹೋಲಿಕೆ  

ತರುವಾಯ ಇಷಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದು ಹೇಳಿದನು.


ಅನಂತರ ಸಮುವೇಲನು ಇಷಯನನ್ನು - ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ ಎಂದು ಕೇಳಲು ಅವನು - ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ ಎಂದು ಉತ್ತರಕೊಟ್ಟನು. ಆಗ ಸಮುವೇಲನು - ಅವನನ್ನು ಕರೇಕಳುಹಿಸು; ಅವನು ಬರುವವರೆಗೂ ನಾವು ಊಟಕ್ಕೆ ಕೂತುಕೊಳ್ಳಬಾರದು ಎಂದು ಹೇಳಲು ಇಷಯನು ಅವನನ್ನು ಕರತರಿಸಿದನು.


ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು