Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:16 - ಕನ್ನಡ ಸತ್ಯವೇದವು J.V. (BSI)

16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಬಾರಿಸಿದರೆ ನಿನಗೆ ಉಪಶಮನವಾಗುವದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮಗೆ ಆಜ್ಞಾಪಿಸುವುದಾದರೆ, ಕಿನ್ನರಿ ಬಾರಿಸುವವನನ್ನು ಹುಡುಕಿ ಕರೆದುಕೊಂಡು ಬರುತ್ತೇವೆ. ಯೆಹೋವನಿಂದ ಬಂದ ದುರಾತ್ಮವು ನಿನ್ನ ಮೈಮೇಲೆ ಬಂದಾಗ ಅವನು ಕಿನ್ನರಿ ಬಾರಿಸಿದರೆ, ದುರಾತ್ಮವು ನಿನ್ನನ್ನು ಬಿಟ್ಟುಹೋಗಿ ನಿನಗೆ ಉಪಶಮನವಾಗುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:16
10 ತಿಳಿವುಗಳ ಹೋಲಿಕೆ  

ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)


ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ಕ್ರಮದ ಪ್ರಕಾರ ಕಿನ್ನರಿಯನ್ನು ಬಾರಿಸುತ್ತಾ ಇದ್ದನು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.


ಯೆಹೋವನ ಆತ್ಮವು ಸೌಲನನ್ನು ಬಿಟ್ಟುಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದದರಿಂದ


ಅವನ ಸೇವಕರು ಅವನಿಗೆ - ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಪೀಡಿಸುತ್ತಾ ಇದೆ.


ಸೌಲನು ಅವರಿಗೆ - ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು