Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:21 - ಕನ್ನಡ ಸತ್ಯವೇದವು J.V. (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು; ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವದಕ್ಕೆ ನೇವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿ ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದಾವೀದನು ಸೌಲನ ಹತ್ತಿರಕ್ಕೆ ಹೋಗಿ, ಅವನ ಮುಂದೆ ನಿಂತನು. ಸೌಲನು ದಾವೀದನನ್ನು ಬಹಳ ಪ್ರೀತಿಸಿದನು. ದಾವೀದನು ಸೌಲನ ಆಯುಧಗಳನ್ನು ಹೊರುವ ಸಹಾಯಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:21
13 ತಿಳಿವುಗಳ ಹೋಲಿಕೆ  

ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ಯೋಸೇಫನು ಐಗುಪ್ತದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರುಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚಾರ ಮಾಡಿದನು.


ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನವನನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತನಲ್ಲ;


ಪ್ರಭುಗಳಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ತರುವಾಯ ಸೌಲನು ಇಷಯನ ಬಳಿಗೆ ದೂತರನ್ನು ಅಟ್ಟಿ ಅವನಿಗೆ - ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲಿ ಸೇವೆಮಾಡಲಿ ಎಂದು ತಿಳಿಸಿದನು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವದಕ್ಕೋಸ್ಕರ ಬೇತ್ಲೆಹೇವಿುಗೆ ಹೋದನು.


ದಾವೀದನು ಫಿಲಿಷ್ಟಿಯನೊಡನೆ ಯುದ್ಧಮಾಡುವದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು - ಅಬ್ನೇರನೇ, ಈ ಹುಡುಗನು ಯಾರ ಮಗನು ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ - ಅರಸನೇ, ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ ಎಂದು ಉತ್ತರಕೊಟ್ಟನು.


ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು