Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:3 - ಕನ್ನಡ ಸತ್ಯವೇದವು J.V. (BSI)

3 ಆಮೇಲೆ ನೀನು ಮಾಡಬೇಕಾದದ್ದನ್ನು ನಾನೇ ತಿಳಿಸುತ್ತೇನೆ; ನಾನು ಯಾವನನ್ನು ತೋರಿಸುತ್ತೇನೋ ಅವನನ್ನು ನೀನು ಅಭಿಷೇಕಿಸಬೇಕು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಜ್ಞಕಾರ್ಯಕ್ಕೆ ಇಷಯನನ್ನು ಆಹ್ವಾನಿಸು. ಆ ಮೇಲೆ ನೀನು ಮಾಡಬೇಕಾದದ್ದನ್ನು ನಾನು ತೋರಿಸುತ್ತೇನೆ. ನಾನು ತೋರಿಸಿದ ಮನುಷ್ಯನಿಗೆ ನೀನು ಅಭಿಷೇಕವನ್ನು ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:3
10 ತಿಳಿವುಗಳ ಹೋಲಿಕೆ  

ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು; ನೀನು ಅವನನ್ನು ಇಸ್ರಾಯೇಲ್ಯರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ ಎಂದು ತಿಳಿಸಿದ್ದನು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.


ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಅಭಿಷೇಕಿಸಲಿ; ಅನಂತರ ಕೊಂಬನ್ನೂದಿರಿ; ಎಲ್ಲರೂ ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಲಿ.


ಆಗ ಅರಸನಾದ ದಾವೀದನು ತನ್ನ ಹತ್ತಿರ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನಿಂದಾದ ಆಜ್ಞೆಗನುಸಾರವಾಗಿ ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು