1 ಸಮುಯೇಲ 17:10 - ಕನ್ನಡ ಸತ್ಯವೇದವು J.V. (BSI)10 ಮತ್ತು ಅವನು - ಈ ಹೊತ್ತು ಇಸ್ರಾಯೇಲ್ ಸೈನ್ಯದವರನ್ನು ಹೀಯಾಳಿಸುತ್ತೇನೆ; ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು. ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.