Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:13 - ಕನ್ನಡ ಸತ್ಯವೇದವು J.V. (BSI)

13 ಇವನ ಮೂರು ಮಂದಿ ಹಿರೀ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಮರಚಲ ಮಗನ ಹೆಸರು ಅಬೀನಾದಾಬ್; ಮೂರನೆಯವನ ಹೆಸರು ಶಮ್ಮ. ದಾವೀದನೇ ಎಲ್ಲರಿಗಿಂತಲೂ ಕಿರಿಯವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವನ ಮೂರು ಹಿರಿಯ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ, ಎರಡನೆಯ ಮಗನ ಹೆಸರು ಅಬೀನಾದಾಬ, ಮೂರನೆಯವನ ಹೆಸರು ಶಮ್ಮ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವನ ಮೂರು ಮಂದಿ ಹಿರಿಯ ಮಕ್ಕಳು ಸೌಲನ ಜೊತೆ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಎರಡನೆಯವನ ಹೆಸರು ಅಬೀನಾದಾಬ್; ಮೂರನೆಯವನು ಶಮ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಷಯನ ಮೂವರು ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದರು. ಎಲೀಯಾಬನು ಮೊದಲನೆಯ ಮಗ. ಅಬೀನಾದಾಬನು ಎರಡನೆಯ ಮಗ. ಶಮ್ಮನು ಮೂರನೆಯ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಷಯನ ಮೂವರು ಹಿರಿಯ ಪುತ್ರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಪುತ್ರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು, ಎರಡನೆಯವನ ಹೆಸರು ಅಬೀನಾದಾಬನು; ಮೂರನೆಯವನ ಹೆಸರು ಶಮ್ಮನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:13
6 ತಿಳಿವುಗಳ ಹೋಲಿಕೆ  

ಇಷಯನ ಚೊಚ್ಚಲಮಗನು ಎಲೀಯಾಬ್; ಮರಚಲನು ಅಬೀನಾದಾಬ್; ಮೂರನೆಯವನು ಶಿಮ್ಮ;


ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.


ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ದಾವೀದನು ಜನರ ಸಂಗಡ ಹೀಗೆ ಮಾತಾಡುತ್ತಿರುವದನ್ನು ಅವನ ಹಿರೀ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು - ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿ? ನಿನ್ನ ಸೊಕ್ಕೂ ತುಂಟತನವೂ ನನಗೆ ಗೊತ್ತದೆ; ನೀನು ಯುದ್ಧವನ್ನು ನೋಡುವದಕ್ಕೆ ಬಂದಿದ್ದೀ ಎಂದು ಅವನನ್ನು ಗದರಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು