Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:2 - ಕನ್ನಡ ಸತ್ಯವೇದವು J.V. (BSI)

2 ಸೌಲನೂ ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೌಲನು ಮತ್ತು ಇಸ್ರೇಲಿನ ಸೈನಿಕರು ಒಟ್ಟಾಗಿ ಸೇರಿ ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡರು. ಸೌಲನ ಸೈನಿಕರು ಸಾಲಾಗಿನಿಂತು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಸಿದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:2
4 ತಿಳಿವುಗಳ ಹೋಲಿಕೆ  

ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.


ಸೌಲನೂ ಇಸ್ರಾಯೇಲ್ಯರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ ಎಂದು ಹೇಳಿದನು.


ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲಿಯೂ ಇಸ್ರಾಯೇಲ್ಯರು ಇನ್ನೊಂದು ಗುಡ್ಡದ ಪಕ್ಕದಲ್ಲಿಯೂ ನಿಂತರು.


ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು