Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:37 - ಕನ್ನಡ ಸತ್ಯವೇದವು J.V. (BSI)

37 ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋವನು ನನ್ನನ್ನು ಸಿಂಹದಿಂದಲೂ ಕರಡಿಯಿಂದಲೂ ರಕ್ಷಿಸಿದನು. ಯೆಹೋವನು ಈ ಗೊಲ್ಯಾತನಿಂದಲೂ ನನ್ನನ್ನು ರಕ್ಷಿಸುತ್ತಾನೆ” ಎಂದು ಹೇಳಿದನು. ಸೌಲನು ದಾವೀದನಿಗೆ, “ಹೋಗು, ಯೆಹೋವನು ನಿನ್ನೊಂದಿಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:37
21 ತಿಳಿವುಗಳ ಹೋಲಿಕೆ  

ನೀನು ನನಗೆ ಸಹಾಯಕನಾಗಿದ್ದಿಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು ಆನಂದಘೋಷ ಮಾಡುತ್ತಿರುವೆನು.


ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ನನ್ನ ತಂದೆಯು ನಿನಗೆ ಕೇಡುಮಾಡ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ. ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.


ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡಿಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.


ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ.


ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಅವನಿಗೆ ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ತೊಡಿಸಿ ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು;


ಅರಸೇ, ನಾವು ಸೇವಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಆವಿಗೆಯೊಳಗಿಂದ, ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.


ನಾವು ಮೋಶೆಯ ಎಲ್ಲಾ ಮಾತುಗಳನ್ನು ಕೇಳಿದಂತೆ ನಿನ್ನ ಮಾತುಗಳನ್ನೂ ಕೇಳುವೆವು; ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡಲೂ ಇರಲಿ.


ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.


ಯೆಹೋವನು ನನಗಿದ್ದಾನೆ; ಭಯಪಡೆನು; ಮನುಷ್ಯನು ನನಗೆ ಏನು ಮಾಡಾನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು