1 ಸಮುಯೇಲ 17:45 - ಕನ್ನಡ ಸತ್ಯವೇದವು J.V. (BSI)45 ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ದಾವೀದನು ಅವನಿಗೆ, “ನೀನು ಈಟಿ, ಕತ್ತಿ, ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ. ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ, ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ. ಅಧ್ಯಾಯವನ್ನು ನೋಡಿ |