1 ಸಮುಯೇಲ 17:47 - ಕನ್ನಡ ಸತ್ಯವೇದವು J.V. (BSI)47 ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೆಹೋವನು ಈಟಿಕತ್ತಿಗಳಿಲ್ಲದೇ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರಿಗೆಲ್ಲಾ ತಿಳಿದುಬರುವುದು. ಯಾಕೆಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ. ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು