1 ಸಮುಯೇಲ 17:49 - ಕನ್ನಡ ಸತ್ಯವೇದವು J.V. (BSI)49 ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಚೀಲದಲ್ಲಿ ಕೈ ಹಾಕಿ, ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು. ಅವನು ಬೋರಲುಬಿದ್ದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖಕೆಳಗಾಗಿ ನೆಲಕ್ಕೆ ಉರುಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ದಾವೀದನು ತನ್ನ ಚೀಲದಿಂದ ಒಂದು ಕಲ್ಲನ್ನು ಹೊರತೆಗೆದನು. ಅದನ್ನು ಅವನು ಕವಣೆಯಲ್ಲಿ ಸಿಕ್ಕಿಸಿ ಬೀಸಿ ಹೊಡೆದನು. ಕವಣೆಯಿಂದ ಅವನು ಬೀಸಿದ ಕಲ್ಲು ಗೊಲ್ಯಾತನ ಹಣೆಗೆ ಬಡಿಯಿತು. ಆ ಕಲ್ಲು ಅವನ ಹಣೆಯಲ್ಲಿ ಆಳವಾದ ಗಾಯವನ್ನು ಮಾಡಿತು. ಕೂಡಲೇ ಗೊಲ್ಯಾತನು ಬೋರಲಾಗಿ ನೆಲದ ಮೇಲೆ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು. ಅಧ್ಯಾಯವನ್ನು ನೋಡಿ |