Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:50 - ಕನ್ನಡ ಸತ್ಯವೇದವು J.V. (BSI)

50 ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:50
9 ತಿಳಿವುಗಳ ಹೋಲಿಕೆ  

ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.


ದಾವೀದನು ಯುದ್ಧವಸ್ತ್ರದ ಮೇಲೆ ಕತ್ತಿಯನ್ನು ಬಿಗಿದುಕೊಂಡನಂತರ ನಡೆಯಬಹುದೋ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ - ನನಗೆ ಅಭ್ಯಾಸವಿಲ್ಲದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ ಎಂದು ಹೇಳಿ ಅವುಗಳನ್ನು ತೆಗೆದಿಟ್ಟು


ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು.


ಈ ಪ್ರಕಾರ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ಫಿಲಿಷ್ಟಿಯರು ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಓಡಿಹೋದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು