1 ಸಮುಯೇಲ 17:58 - ಕನ್ನಡ ಸತ್ಯವೇದವು J.V. (BSI)58 ಸೌಲನು ಅವನನ್ನು - ಹುಡುಗನೇ, ನೀನು ಯಾರ ಮಗನೆಂದು ಕೇಳಿದ್ದಕ್ಕೆ ಅವನು - ನಾನು ಬೇತ್ಲೆಹೇವಿುನವನೂ ನಿನ್ನ ಸೇವಕನೂ ಆದ ಇಷಯನ ಮಗನು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಸೌಲನು, “ಯುವಕನೇ, ನಿನ್ನ ತಂದೆ ಯಾರು?” ಎಂದು ಪ್ರಶ್ನಿಸಿದನು. ದಾವೀದನು, “ನಾನು ನಿಮ್ಮ ಸೇವಕನಾದ ಬೆತ್ಲೆಹೇಮಿನ ಇಷಯನ ಮಗ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ58 ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.