1 ಸಮುಯೇಲ 17:8 - ಕನ್ನಡ ಸತ್ಯವೇದವು J.V. (BSI)8 ಅವನು ನಿಂತು ಇಸ್ರಾಯೇಲ್‍ಸೈನ್ಯದವರನ್ನು ಕೂಗಿ ಅವರಿಗೆ - ನೀವು ಯುದ್ಧಮಾಡಬಂದದ್ದೇಕೆ? ನಾನು ಫಿಲಿಷ್ಟಿಯನು, ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗೊಲ್ಯಾತನು ಪ್ರತಿದಿನ ಹೊರಕ್ಕೆ ಬಂದು ಇಸ್ರೇಲಿನ ಸೈನಿಕರನ್ನು ಕಂಡು ಆರ್ಭಟಿಸುತ್ತಿದ್ದನು. ಅವನು, “ನೀವೆಲ್ಲ ಸಾಲಾಗಿನಿಂತು ಯುದ್ಧಕ್ಕೆ ಸಿದ್ಧರಾಗಿರುವುದೇಕೆ? ನೀವು ಸೌಲನ ಸೇವಕರು. ನಾನು ಫಿಲಿಷ್ಟಿಯನು, ನೀವು ಒಬ್ಬನನ್ನು ಆರಿಸಿ ನನ್ನೊಡನೆ ಹೋರಾಡಲು ಕಳುಹಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.