Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:17 - ಕನ್ನಡ ಸತ್ಯವೇದವು J.V. (BSI)

17 ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:17
22 ತಿಳಿವುಗಳ ಹೋಲಿಕೆ  

ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;


ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.


ಅವರು - ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ! ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು; ಇದಲ್ಲದೆ ಅವನ ಕುಟುಂಬಕ್ಕೆ ಸರ್ವಮಾನ್ಯವನ್ನು ಕೊಡುವನು ಎಂದು ಮಾತಾಡಿಕೊಳ್ಳುತ್ತಿದ್ದರು.


ಸೌಲನು - ದಾವೀದನಿಗೆ ಉರಲಾಗಿರುವಂತೆಯೂ ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ - ನೀನು ನನ್ನ ಅಳಿಯನಾಗುವದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು ಎಂದು ಹೇಳಿದನು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಅದರಲ್ಲಿದ್ದದ್ದೇನಂದರೆ - ಊರೀಯನು ಗಾಯಹೊಂದಿ ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆಗೆ ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿರಿ ಎಂಬದೇ.


ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಗಾದ್ಯರಲ್ಲಿಯೂ ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ಹೊಳೆಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವದಕ್ಕೆ ಕೊಡಬೇಕು.


ನಿನ್ನ ದಾಸರಾದ ನಮ್ಮಲ್ಲಿ ಯುದ್ಧ ಸನ್ನದ್ಧರೆಲ್ಲರೂ ಸ್ವಾವಿುಯವರ ಅಪ್ಪಣೆಯ ಮೇರೆಗೆ ಯೆಹೋವನ ಮುಂದುಗಡೆಯಲ್ಲಿ ಹೊರಟು ಹೊಳೆಯನ್ನು ದಾಟಿ ಯುದ್ಧಮಾಡುವೆವು ಎಂದು ಉತ್ತರಕೊಟ್ಟರು.


ಅದಕ್ಕೆ ಮೋಶೆ - ನೀವು ಆ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ


ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ


ಸೌಲನ ಗಂಡು ಮಕ್ಕಳು - ಯೋನಾತಾನ್, ಇಷ್ವಿ, ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್, ಮೀಕಲ್.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;


ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.


ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಿಕಿ ನೋಡಿ ದಾವೀದನು ಯೆಹೋವನ ಮುಂದೆ ಜಿಗಿಯುತ್ತಾ ಕುಣಿಯುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ಹಗೆಯವನು ತುಟಿಯಲ್ಲಿ ಸ್ನೇಹಭಾವವನ್ನು ನಟಿಸುತ್ತಾನೆ. ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ;


ಸವಿಮಾತಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಅಸಹ್ಯಗಳು;


ತನ್ನ ಹಗೆಯನ್ನು ವಂಚನೆಯಿಂದ ಮರೆಮಾಜಿಕೊಂಡಿದ್ದರೂ ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು