Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:25 - ಕನ್ನಡ ಸತ್ಯವೇದವು J.V. (BSI)

25 ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:25
13 ತಿಳಿವುಗಳ ಹೋಲಿಕೆ  

ಒಂದು ದಿವಸ ಸೌಲನು - ಇವನು ನನ್ನ ಕೈಯಿಂದಲ್ಲ, ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ - ನೀನು ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು; ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ ಅಂದನು.


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಬೇಕು ಎಂದು ಹೇಳಿದನು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿಮಾಡಿದನು.


ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು


ದಾವೀದನು ಅಂದದ್ದನ್ನು ಸೇವಕರು ಸೌಲನಿಗೆ ತಿಳಿಸಿದರು.


ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.


ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು