Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:28 - ಕನ್ನಡ ಸತ್ಯವೇದವು J.V. (BSI)

28 ಆಕೆಯು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು ಸೌಲನು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ದಾವೀದನೊಂದಿಗಿರುವುದನ್ನೂ ತನ್ನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸುತ್ತಿರುವುದನ್ನೂ ಸೌಲನು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:28
10 ತಿಳಿವುಗಳ ಹೋಲಿಕೆ  

ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.


ಕೇಳು, ನೀನು ಹೇಗೂ ಅರಸನಾಗುವಿಯೆಂದೂ ಇಸ್ರಾಯೇಲ್ ರಾಜ್ಯವು ನಿನ್ನಲ್ಲಿ ಸ್ಥಿರವಾಗುವದೆಂದೂ ಬಲ್ಲೆನು.


ಯೆಹೋವನು ಯೋಸೇಫನ ಸಂಗಡವಿದ್ದು ಅವನು ಮಾಡುವ ಕೆಲಸವನ್ನೆಲ್ಲಾ ಸಫಲವಾಗುವಂತೆ ಮಾಡುತ್ತಾನೆಂದು ಅವನ ದಣಿಯು ತಿಳಿದು


ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.


ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.


ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ ಅಲ್ಲಿನ ಇನ್ನೂರು ಜನರನ್ನು ಕೊಂದು ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗುವದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು;


ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.


ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು