1 ಸಮುಯೇಲ 18:3 - ಕನ್ನಡ ಸತ್ಯವೇದವು J.V. (BSI)3 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಅಧ್ಯಾಯವನ್ನು ನೋಡಿ |