Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:30 - ಕನ್ನಡ ಸತ್ಯವೇದವು J.V. (BSI)

30 ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:30
17 ತಿಳಿವುಗಳ ಹೋಲಿಕೆ  

ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.


ಆದದರಿಂದ ನಂಬುವವರಾದ ನಿಮಗೇ ಈ ಮಾನವುಂಟು. ನಂಬದೆಯಿರುವವರಿಗೋ - ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂತಲೂ


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವದರಿಂದ ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವದಿಲ್ಲ.


ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.


ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.


ಫಿಲಿಷ್ಟಿಯರು ತಿರಿಗಿ ಯುದ್ಧಕ್ಕೆ ಬರುವಲ್ಲಿ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಓಡಿಸಿಬಿಟ್ಟನು.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು