Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:5 - ಕನ್ನಡ ಸತ್ಯವೇದವು J.V. (BSI)

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡಿಸುತ್ತಿದ್ದನು. ಸೌಲನು ಇವನನ್ನು ಸೇನಾಪತಿಯನ್ನಾಗಿ ನೇವಿುಸಿದನು; ಇದು ಅವನ ಸೇವಕರಿಗೂ ಎಲ್ಲಾ ಜನರಿಗೂ ಸಮ್ಮತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು ದಾವೀದನನ್ನು ಬೇರೆಬೇರೆ ಯುದ್ಧಗಳಲ್ಲಿ ಹೋರಾಡಲು ಕಳುಹಿಸಿದನು. ದಾವೀದನು ಆ ಯುದ್ಧಗಳಲ್ಲೆಲ್ಲಾ ಯಶ್ವಸಿಯಾದನು. ಆದ್ದರಿಂದ ಸೌಲನು ದಾವೀದನನ್ನು ಸೈನ್ಯಾಧಿಪತಿಯನ್ನಾಗಿ ನೇಮಿಸಿದನು. ಇದು ಸೌಲನ ಅಧಿಕಾರಿಗಳಿಗೂ ಇತರರಿಗೂ ಸಂತಸವನ್ನು ಉಂಟುಮಾಡಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:5
20 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಅವರಿಂದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಅವರಲ್ಲಿ ಎರಡು ಸಾವಿರ ಜನರನ್ನು ವಿುಕ್ಮಾಷಿನಲ್ಲಿಯೂ ಬೇತೇಲಿನ ಗುಡ್ಡದಲ್ಲಿಯೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ.


ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ಘೋರ ಯುದ್ಧವಿದ್ದದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡರೆ ಕೂಡಲೆ ಅವನನ್ನು ತನ್ನ ಹತ್ತಿರ ಇಟ್ಟುಕೊಳ್ಳುತ್ತಿದ್ದನು.


ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನೂ ತನ್ನ ಯುದ್ಧವಸ್ತ್ರಗಳನ್ನೂ ಕತ್ತಿ ಬಿಲ್ಲು ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು ಸಂತೋಷದಿಂದ ಹಾಡುತ್ತಾ ಕುಣಿಯುತ್ತಾ ಅರಸನಾದ ಸೌಲನನ್ನು ಎದುರುಗೊಂಡರು.


ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥಹೃದಯದಿಂದಲೇ ಪ್ರವರ್ತಿಸುವೆನು.


ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.


ಸಮುವೇಲನು ದೊಡ್ಡವನಾಗುತ್ತಾ ಬಂದನಷ್ಟೆ. ಯೆಹೋವನು ಅವನೊಡನೆ ಇದ್ದದರಿಂದ ಅವನ ಪ್ರವಾದನೆಗಳಲ್ಲಿ ಒಂದೂ ಬಿದ್ದುಹೋಗಲಿಲ್ಲ.


ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.


ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು