Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:1 - ಕನ್ನಡ ಸತ್ಯವೇದವು J.V. (BSI)

1 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:1
10 ತಿಳಿವುಗಳ ಹೋಲಿಕೆ  

ದಾವೀದನು ಸೌಲನೊಡನೆ ಮಾತಾಡಿ ತೀರಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ಇವನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


ಅಂದಿನಿಂದ ಅವನ ಮೇಲೆ ಕಣ್ಣಿಟ್ಟನು.


ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು


ಆದದರಿಂದ ಅವನು ದಾವೀದನಿಗೆ - ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಪ್ತಸ್ಥಳದಲ್ಲಿ ಅಡಗಿಕೊಂಡಿರು.


ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವದಕ್ಕೆ ಒಳಸಂಚುಮಾಡಿಕೊಂಡರು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.


ಆಗ ಅವನು ಅವರಿಗೆ - ನೀವು ಹೋಗಿ ದಾವೀದನಿಗೆ - ಅರಸನು ತೆರವನ್ನು ಅಪೇಕ್ಷಿಸುವದಿಲ್ಲ; ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆಂದು ಹೇಳಿರಿ ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬದೇ ಇದಕ್ಕೆ ಕಾರಣ.


ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -


ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕೂತುಕೊಂಡಿರು.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು