Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:13 - ಕನ್ನಡ ಸತ್ಯವೇದವು J.V. (BSI)

13 ಅನಂತರ ಆಕೆಯು ಪೂಜೆಯ ಬೊಂಬೆಯನ್ನು ತಂದು ಹಾಸಿಗೆಯ ಮೇಲೆ ಮಲಗಿಸಿ ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ಹಾಕಿ ಕಂಬಳಿಯನ್ನು ಹೊದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನಂತರ ಆಕೆಯು ಮನೆಯಲ್ಲಿದ್ದ ಒಂದು ವಿಗ್ರಹವನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯನ್ನು ತಲೆದಿಂಬಿನ ಜಾಗದಲ್ಲಿ ಹಾಕಿ ಕಂಬಳಿಯನ್ನು ಹೊದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನಂತರ ಆಕೆ ಗೊಂಬೆಯೊಂದನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಮಾಡಿದ ತಲೆದಿಂಬನ್ನು ಇಟ್ಟು ಕಂಬಳಿಯನ್ನು ಹೊದಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೀಕಲಳು ಮನೆಯಲ್ಲಿದ್ದ ವಿಗ್ರಹವನ್ನು ಹಾಸಿಗೆಯ ಮೇಲೆ ಇಟ್ಟು ಅದಕ್ಕೆ ಬಟ್ಟೆಗಳನ್ನು ತೊಡಿಸಿ ಅದರ ತಲೆಗೆ ಹೋತದ ಕೂದಲನ್ನೂ ಅಂಟಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:13
6 ತಿಳಿವುಗಳ ಹೋಲಿಕೆ  

ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ಯಾಜಕನೂ ಬಂದು ಇವರೊಡನೆ ಬಾಗಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ಏಫೋದನ್ನೂ ದೇವತಾ ಪ್ರತಿಮೆಗಳನ್ನೂ ತೆಗೆದುಕೊಂಡರು.


ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ - ಈ ಗ್ರಾಮದಲ್ಲಿ ಒಂದು ಏಫೋದೂ ದೇವತಾಪ್ರತಿಮೆಗಳೂ ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬದು ನಿಮಗೆ ಗೊತ್ತುಂಟೋ?


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಈ ಮೀಕನು ಏಫೋದನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಅವರು ಹೋಗಿ ನೋಡಲು ಮುಖದ ಮೇಲೆ ಮೇಕೆಕೂದಲಿನಿಂದ ಹೆಣೆದ ಜಾಲರಿಯುಳ್ಳದ್ದಾಗಿ ಹಾಸಿಗೆಯ ಮೇಲಿರುವದು ಒಂದು ಬೊಂಬೆಯೆಂದು ತಿಳಿದುಬಂದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು