1 ಸಮುಯೇಲ 19:15 - ಕನ್ನಡ ಸತ್ಯವೇದವು J.V. (BSI)15 ಸೌಲನು ತಿರಿಗಿ ತನ್ನ ಆಳುಗಳಿಗೆ - ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ತನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದು ಹಾಕುತ್ತೇನೆ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೌಲನು ತಿರುಗಿ ತನ್ನ ಆಳುಗಳನ್ನು, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಕೊಂದುಹಾಕುತ್ತೇನೆ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೌಲನು ಪುನಃ ತನ್ನ ಆಳುಗಳಿಗೆ, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿ, ಅವನನ್ನು ಕೊಂದುಹಾಕುತ್ತೇನೆ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಸಂದೇಶಕರು ಹೋಗಿ ಸೌಲನಿಗೆ ವಿಷಯ ತಿಳಿಸಿದಾಗ ಅವನು ದಾವೀದನನ್ನು ನೋಡಲು ಮತ್ತೆ ಸಂದೇಶಕರನ್ನು ಕಳುಹಿಸಿದನು. ಸೌಲನು ಅವರಿಗೆ, “ದಾವೀದನನ್ನು ನನ್ನ ಬಳಿಗೆ ಕರೆತನ್ನಿ! ಹಾಸಿಗೆಯ ಮೇಲೆ ಮಲಗಿರುವ ಅವನನ್ನು ಹಾಸಿಗೆಯ ಸಮೇತವಾಗಿ ತೆಗೆದುಕೊಂಡು ಬನ್ನಿ! ನಾನು ಅವನನ್ನು ಕೊಲ್ಲುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿ |