Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 19:8 - ಕನ್ನಡ ಸತ್ಯವೇದವು J.V. (BSI)

8 ಫಿಲಿಷ್ಟಿಯರು ತಿರಿಗಿ ಯುದ್ಧಕ್ಕೆ ಬರುವಲ್ಲಿ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 19:8
8 ತಿಳಿವುಗಳ ಹೋಲಿಕೆ  

ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.


ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲಿ ಇರುವವನಾದನು.


ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.


ಇಸ್ರಾಯೇಲ್ಯರ ಅರಸನು ಹೊರಟುಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು