Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:13 - ಕನ್ನಡ ಸತ್ಯವೇದವು J.V. (BSI)

13 ಯಜ್ಞವನ್ನರ್ಪಿಸುವದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ - ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಜ್ಞವನ್ನರ್ಪಿಸುವುದಕ್ಕೆ ಬಂದ ಜನರಲ್ಲಿ ಈ ಯಾಜಕರು ನಡಿಸಿದ್ದೇನಂದರೆ, ಯಜ್ಞಮಾಂಸವು ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:13
5 ತಿಳಿವುಗಳ ಹೋಲಿಕೆ  

ಅದನ್ನು ಆ ಮಾಂಸ ಬೇಯುತ್ತಿರುವ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದ್ದೆಲ್ಲವನ್ನೂ ಯಾಜಕನಿಗೋಸ್ಕರ ತೆಗೆದುಕೊಳ್ಳುತ್ತಿದ್ದನು. ಶೀಲೋವಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೂ ಹೀಗೆಯೇ ಮಾಡುತ್ತಿದ್ದರು.


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು